ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಾಗತಿಕ ಉದ್ಯಮಿಗಳ ಶೃಂಗಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಇವಾಂಕ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೇ ಬಳಿಕ ಮುತ್ತಿನ ನಗರಿಯ ತಾಜ್ ಫಲಕ್ನುಮಾ ಅರಮನೆಯಲ್ಲಿ ಪ್ರಧಾನಿ ಅವರೊಂದಿಗೆ ಔತಣಕೂಟಲ್ಲಿಯೂ ಭಾಗಿಯಾಗಲಿದ್ದಾರೆ.
ಹೈದರಾಬಾದ್(ನ.28): ಹೈದರಾಬಾದ್'ನಲ್ಲಿ ಇಂದಿನಿಂದ ಆರಂಭವಾಗಲಿರುವ ಮೂರು ದಿನಗಳ ಜಾಗತಿಕ ಉದ್ಯಮಿಗಳ ಶೃಂಗಸಭೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಟ್ರಂಪ್ ಅಮೆರಿಕ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಜಾಗತಿಕ ಕಾರ್ಯಕ್ರಮವೊಂದರಲ್ಲಿ ಇವಾಂಕ ಪಾಲ್ಗೊಳ್ಳುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಾಗತಿಕ ಉದ್ಯಮಿಗಳ ಶೃಂಗಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೇ ಬಳಿಕ ಮುತ್ತಿನ ನಗರಿಯ ತಾಜ್ ಫಲಕ್ನುಮಾ ಅರಮನೆಯಲ್ಲಿ ಪ್ರಧಾನಿ ಅವರೊಂದಿಗೆ ಔತಣಕೂಟಲ್ಲಿಯೂ ಭಾಗಿಯಾಗಲಿದ್ದಾರೆ. ಭಾರತದ ಪ್ರವಾಸ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಗುರಿಯನ್ನೂ ಅವರು ಹೊಂದಿದ್ದಾರೆ. ಈ ಉದ್ಯಮಿಗಳ ಶೃಂಗ ಸಭೆಯಲ್ಲಿ 1500 ಮಂದಿ ವಿವಿಧ ದೇಶದ ಪ್ರತಿಷ್ಠಿತ ಕಂಪನಿಗಳ ಸಿಇಒಗಳು, ಪ್ರಮುಖ ಉದ್ಯಮಿಗಳು ಕೂಡ ಭಾಗವಹಿಸುತ್ತಿದ್ದಾರೆ.
