ತಾತನಿಂದಲೇ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ : 7 ವರ್ಷ ಕಠಿಣ ಶಿಕ್ಷೆ

First Published 23, Jan 2018, 11:32 AM IST
Tumkur Sexual Harassment Case
Highlights

ತುಮಕೂರಿನಲ್ಲಿ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾತನಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. ಇಲ್ಲಿನ 3ನೇ ಅಧಿಕ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು ತೀರ್ಪು ಹೊರಡಿಸಿದೆ.

ತುಮಕೂರು (ಜ.23): ತುಮಕೂರಿನಲ್ಲಿ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾತನಿಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. ಇಲ್ಲಿನ 3ನೇ ಅಧಿಕ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು ತೀರ್ಪು ಹೊರಡಿಸಿದೆ.

2016ರಲ್ಲಿ ರಮೇಶ್ ಎಂಬಾತ ವಸತಿ ಶಾಲೆಯಿಂದ ಬಾಲಕಿಯನ್ನು ಕರೆದೊಯ್ದು, ಲಾಡ್ಜ್ ಒಂದರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೇ ವಿಡಿಯೋ ಮಾಡಿ ಬಾಲಕಿಯನ್ನು ಹೆದರಿಸಿದ್ದ. 

 ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರಲ್ಲಿ ಬಾಲಕಿಯ ತಾಯಿ ಮಹಿಳಾ ಠಾಣೆಗೆ ದೂರು ನೀಡಿದ್ದರು. ಬಳಿಕ ವೃದ್ಧನನ್ನು ಬಂಧಿಸಿ ಚಾರ್ಜ್ ಶೀಟ್ ದಾಖಲಿಸಲಾಗಿತ್ತು. ಪ್ರಕರಣವನ್ನು ವಿಚಾರಣೆ ನಡೆಸಿ 7 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಲಾಗಿದೆ.

loader