ಜಾಗತಿಕ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಟಿವಿ ಪತ್ರಕರ್ತ ರವೀಶ್ ಕುಮಾರ್  ಕುಲದೀಪ್ ನಯ್ಯರ್ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಫಲಕದ ಜೊತೆ 1 ಲಕ್ಷ ನಗದು ಬಹುಮಾನವನ್ನು ಪಡೆದಿದ್ದಾರೆ.

ನವದೆಹಲಿ (ಮಾ.20): ಜಾಗತಿಕ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ ಟಿವಿ ಪತ್ರಕರ್ತ ರವೀಶ್ ಕುಮಾರ್ ಕುಲದೀಪ್ ನಯ್ಯರ್ ಪತ್ರಿಕೋದ್ಯಮ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಫಲಕದ ಜೊತೆ 1 ಲಕ್ಷ ನಗದು ಬಹುಮಾನವನ್ನು ಪಡೆದಿದ್ದಾರೆ.

Add Asianetnews Kannada as a Preferred SourcegooglePreferred

ಗಾಂಧಿ ಶಾಂತಿ ಫೌಂಡೇಶನ್ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಸಮಾರಂಭವನ್ನು ಆಯೋಜಿಸಿದ್ದು ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ರವೀಶ್ ಕುಮಾರ್ ಗೆ ಪ್ರಶಸ್ತಿ ಪ್ರಧಾನ ಮಾಡಿದರು. ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲೇ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ ಎಂದು ಕುಲದೀಪ್ ನಯ್ಯರ್ ತಮಾಷೆ ಮಾಡಿದರು.

ದೇಶೀಯ ಮಾಧ್ಯಮಗಳಲ್ಲಿ ಅಪ್ರತಿಮ ಸಾಧನೆ ಮಾಡಿದವರಿಗೆ ಈ ವರ್ಷದಿಂದ ಕುಲದೀಪ್ ನಯ್ಯರ್ ಪ್ರಶಸ್ತಿಯನ್ನು ಕೊಟ್ಟು ಗೌರವಿಸಲಾಗುತ್ತದೆ.