ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್ ಪ್ರಕರಣವನ್ನು ವಜಾಗೊಳಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಮೊರೆ ಹೋಗಿದ್ದರು.
ನವದೆಹಲಿ(ಫೆ.14): ಕರ್ನಾಟಕ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ರಹಸ್ಯ ಕಾರ್ಯಾಚರಣೆ ನಡೆಸಲು ಹೋಗಿ ಬಂಧನಕ್ಕೊಳಗಾಗಿದ್ದ ಸ್ಥಳೀಯ ಕನ್ನಡವಾಹಿನಿಯೊಂದರ ಇಬ್ಬರು ವರದಿಗಾರರು ಹಾಗೂ ಟಿವಿ ಸಂಸ್ಥೆಯ ನಿರ್ದೇಶಕ ವಿಚಾರಣೆ ಎದುರಿಸಲೇಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಾರ್ಚ್ 2014ರಲ್ಲಿ ಉದ್ಯಮಿಗಳ ಸೋಗಿನಲ್ಲಿ ಸಚಿವ ಶಿವಕುಮಾರ್ ಅವರನ್ನು ಭೇಟಿಯಾಗಿ, ಲಂಚದ ಅಮಿಷವೊಡ್ಡಿ ಭ್ರಷ್ಟಾಚಾರವನ್ನು ಹೊರಗೆಳೆಯುವ ರಹಸ್ಯ ಕಾರ್ಯಾಚರಣೆ ವಿಫಲವಾಗಿ ವರದಿಗಾರರ ಮೇಲೆ ಪ್ರಕರಣ ದಾಖಲಾಗಿತ್ತು. ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್ ಪ್ರಕರಣವನ್ನು ವಜಾಗೊಳಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಮೊರೆ ಹೋಗಿದ್ದರು.
ಇದೇವೇಳೆ ರಹಸ್ಯ ಕಾರ್ಯಾಚರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾ. ಆದರ್ಶ್ ಕುಮಾರ್ ಗೋಯಲ್ ಹಾಗೂ ನ್ಯಾ. ಯು. ಯು. ಲಲಿತ್ ಅವರನ್ನೊಳಗೊಂಡ ಪೀಠವು, ಸ್ಟಿಂಗ್ ಆಪರೇಶನ್'ಗಳಿಗೆ ಕೆಲವು ನಿಯಮಗಳನ್ನು ರೂಪಿಸುವ ಅಗತ್ಯವಿದೆ ಹಾಗೂ ಪ್ರಕ್ರಿಯೆಯಲ್ಲಿ ಪೊಲೀಸ್ ಅಧಿಕಾರಿಗಳು ಅಥವಾ ಇನ್ನಿತರ ಕಾನೂನು ಜಾರಿಗೊಳಿಸುವ ಸಂಸ್ಥೆಗಳ ಅಧಿಕಾರಿಗಳನ್ನು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಬೇಕೆಂದು ಅಭಿಪ್ರಾಯಪಟ್ಟಿದೆ.
