ಸಂಸದ ಪ್ರತಾಪ್ ಸಿಂಹ, ರಮ್ಯಾ ಟ್ವೀಟ್ ಸಮರ

ಬೆಂಗಳೂರು(ಆ.27): ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಮತ್ತು ರಾಮ್ ರಹೀಂ ಸಿಂಗ್ ಶಿಕ್ಷೆ ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ಸಿನ ಮಾಜಿ ಸಂಸದೆ ರಮ್ಯಾ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಪ್ರಕರಣವನ್ನು ಮುಂದಿಟ್ಟುಕೊಂಡು ಉಭಯ ನಾಯಕರು ಶನಿವಾರ ಟ್ವೀಟರ್‌ನಲ್ಲಿ ವಾಕ್ಸಮರ ನಡೆಸಿದ್ದಾರೆ.ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಆರೋಪ ಸಾಬೀತಾದ ಬಳಿಕ ಹರಿಯಾಣದಲ್ಲಿ ಗಲಭೆಯಾಗಿದೆ. ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಆದರೂ, ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಕಟ್ಟರ್ ಅವರ ರಾಜೀನಾಮೆ ಕೇಳುತ್ತಿಲ್ಲ ಎಂದು ಮಾಜಿ ಸಂಸದೆ ರಮ್ಯಾ ಅವರು ಟ್ವೀಟರ್‌ನಲ್ಲಿ ಬಿಜೆಪಿಗೆ ಚಾಟಿ ಬೀಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಂಸದ ಪ್ರತಾಪ್ ಸಿಂಹ ಅವರು, ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಯಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಆರೋಪ ಇದೆ. ಜಾರ್ಜ್ ಅವರ ರಾಜೀನಾಮೆ ಪಡೆದುಕೊಳ್ಳುವಂತೆ ಮುಖ್ಯಮಂತ್ರಿಗಳನ್ನು ಯಾಕೆ ನೀವು ಕೇಳುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.