ಮುಂಬೈ, [ನ.05]: 19 ವರ್ಷದ ವಿದ್ಯಾರ್ಥಿನಿಯ ಮೇಲೆ  ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯಲ್ಲಿ ನಡೆದಿದೆ.

 ಈ ಘಟನೆ ನವೆಂಬರ್ 2ರಂದು ರಾತ್ರಿ ಹೈದರಾಬಾದ್-ಜಬಲ್ಪುರ್ ಹೆದ್ದಾರಿಯಲ್ಲಿ ಹಡ್ಕೇಶ್ವರದಲ್ಲಿ ಸಂಭವಿಸಿದೆ. ಘಟನೆ ನಡೆದ ಗಂಟೆಗಳೊಳಗೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಇಬ್ಬರು ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದು, ಕ್ಯಾಸ್‍ಮೇಟ್ ಆಗಿದ್ದರು. ಇಬ್ಬರು ಘಟನೆ ನಡೆದ ಸ್ಥಳದಲ್ಲಿ ಪೊದೆ ಹಿಂದೆ ಕೂತುಕೊಂಡಿದ್ದರು. 

ಈ ವೇಳೆ ಸ್ಥಳಕ್ಕೆ ಬಂದ ಇಬ್ಬರು ವ್ಯಕ್ತಿಗಳು ಆಕೆಯ ಗೆಳೆಯನ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಒಬ್ಬ ಆತನನ್ನು ರಸ್ತೆಯ ಬಳಿ ಎಳೆದುಕೊಂಡು ಹೋಗಿದ್ದಾನೆ. ಇನ್ನೊಬ್ಬ ಆರೋಪಿ ಸಂತ್ರಸ್ತೆಯನ್ನ ಪೊದೆಯೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಈ ಕುರಿತು ಐಪಿಸಿ ಸೆಕ್ಷನ್ ಅಡಿ ಗ್ಯಾಂಗ್‍ರೇಪ್ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಘಟನೆ ನಡೆದ ಗಂಟೆಯೊಳಗೆ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.