. ಅಪಘಾತಗೊಂಡಾಗ ಪೇದೆ ಸ್ಥಳದಲ್ಲೇ ಮೃತಪಟ್ಟರೆ ಸಿಪಿಐ ಮಹೇಶ್ ಕುಮಾರ್‌ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೈಸೂರು(ಜ.28): ಕೆಎಸ್‌ಆರ್‌ಟಿಸಿ ಬಸ್ ಮತ್ತು ಪೊಲೀಸ್ ಜೀಪ್ ನಡುವೆ ಡಿಕ್ಕಿಯಾಗಿ ಇನ್ಸ್‌ಪೆಕ್ಟರ್‌ ಹಾಗೂ ಪೊಲೀಸ್ ಜೀಪ್ ಚಾಲಕ ಸಾವನಪ್ಪಿರುವ ಘಟನೆ ಮೈಸೂರು ಸಮೀಪದ ಚಿಕ್ಕಳ್ಳಿ ಬಳಿ ನಡೆದಿದೆ. ಜಿಲ್ಲಾ ಕ್ರೈಂ ಬ್ರಾಂಚ್ ಇನ್ಸ್‌ಪೆಕ್ಟರ್‌ ಮಹೇಶ್ ಕುಮಾರ್ ಹಾಗೂ ಪೇದೆ ಲಕ್ಷ್ಮಣ್ ಮೃತರು. ಅಪಘಾತಗೊಂಡಾಗ ಪೇದೆ ಸ್ಥಳದಲ್ಲೇ ಮೃತಪಟ್ಟರೆ ಸಿಪಿಐ ಮಹೇಶ್ ಕುಮಾರ್‌ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹೇಶ್ ಕುಮಾರ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred