ವೇತನ ಹೆಚ್ಚಳಕ್ಕಾಗಿ 30, 31ಕ್ಕೆ ಬ್ಯಾಂಕ್‌ ನೌಕರರ ಮುಷ್ಕರ

Two-day bank strike from May 30 to 31
Highlights

ಯುನೈಟೆಡ್‌ ಫೋರಂ ಆಫ್‌ ಬ್ಯಾಂಕ್‌ ಯೂನಿಯನ್‌ (ಯುಎಫ್‌ಬಿಯು) ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೇ 30 ಮತ್ತು 31ರಂದು ದೇಶಾದ್ಯಂತ ಬ್ಯಾಂಕ್‌ ಮುಷ್ಕರಕ್ಕೆ ನೀಡಿದೆ. ರಾಜ್ಯದಲ್ಲೂ ಈ ಎರಡು ದಿನ ಬ್ಯಾಂಕ್‌ ನೌಕರರು ಮುಷ್ಕರದಲ್ಲಿ ಭಾಗವಹಿಸುವುದರಿಂದ ಬ್ಯಾಂಕಿಂಗ್‌ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಬೆಂಗಳೂರು :  ಯುನೈಟೆಡ್‌ ಫೋರಂ ಆಫ್‌ ಬ್ಯಾಂಕ್‌ ಯೂನಿಯನ್‌ (ಯುಎಫ್‌ಬಿಯು) ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೇ 30 ಮತ್ತು 31ರಂದು ದೇಶಾದ್ಯಂತ ಬ್ಯಾಂಕ್‌ ಮುಷ್ಕರಕ್ಕೆ ನೀಡಿದೆ. ರಾಜ್ಯದಲ್ಲೂ ಈ ಎರಡು ದಿನ ಬ್ಯಾಂಕ್‌ ನೌಕರರು ಮುಷ್ಕರದಲ್ಲಿ ಭಾಗವಹಿಸುವುದರಿಂದ ಬ್ಯಾಂಕಿಂಗ್‌ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಆಲ್‌ ಇಂಡಿಯಾ ಬ್ಯಾಂಕ್‌ ಎಂಪ್ಲಾಯೀಸ್‌ ಅಸೋಸಿಯೇಷನ್‌ ಅಧ್ಯಕ್ಷ ಕೆ.ವಸಂತ್‌ ರೈ ಮಾತನಾಡಿ, ವೇತನ ಪರಿಷ್ಕರಣೆ ಬೇಡಿಕೆ ಈಡೇರಿಕೆ ಸಂಬಂಧ ಇಂಡಿಯನ್‌ ಬ್ಯಾಂಕ್‌ ಅಸೋಸಿಯೇಷನ್‌ (ಐಬಿಎ) ಜತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದರೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಎರಡು ದಿನ ದೇಶಾದ್ಯಂತ 10 ಲಕ್ಷ ಮಂದಿ ಬ್ಯಾಂಕ್‌ ನೌಕರರು ಮುಷ್ಕರ ನಡೆಸಲಿದ್ದಾರೆ. ಅಂದು ಬೆಂಗಳೂರಿನ ಕೆ.ಜಿ.ರಸ್ತೆಯ ಎಸ್‌ಬಿಎಂ ಎದುರು ಮುಷ್ಕರ ನಡೆಸಲಾಗುವುದು ಎಂದು ಹೇಳಿದರು.

ಐದು ವರ್ಷಕ್ಕೊಮ್ಮೆ ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ವೇತನ ಪರಿಷ್ಕರಣೆ ಮಾಡಬೇಕೆಂದು ಒತ್ತಾಯಿಸುತ್ತಿದ್ದರೂ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಕಳೆದ ಐದು ವರ್ಷಗಳಲ್ಲಿ ಬ್ಯಾಂಕ್‌ಗಳ ವಹಿವಾಟು ಗಣನೀಯವಾಗಿ ಏರಿಕೆಯಾಗಿದ್ದು, ಸಾಕಷ್ಟುಲಾಭ ಗಳಿಸಿವೆ. ಆದರೂ ನ್ಯಾಯಸಮ್ಮತವಾಗಿ ನೌಕರರ ವೇತನ ಪರಿಷ್ಕರಣೆ ಮಾಡಲು ಹಿಂದೇಟು ಹಾಕಲಾಗುತ್ತಿದೆ. ಕೆಲ ಉದ್ಯಮಿಗಳು ಕೋಟ್ಯಂತರ ರು. ಸಾಲ ಪಡೆದು ವಂಚಿಸಿದ್ದಾರೆ. ಕೆಲವರು ವಂಚಿಸುವ ಉದ್ದೇಶದಿಂದಲೇ ಸಾಲ ಪಡೆದು ಪರಾರಿಯಾಗಿದ್ದಾರೆ. ಕೇಂದ್ರ ಸರ್ಕಾರ ಕಠಿಣ ನಿಯಮಗಳನ್ನು ರೂಪಿಸದಿರುವುದರಿಂದ ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬ್ಯಾಂಕ್‌ ನೌಕರರ ಸಹಕಾರ ಪಡೆಯುತ್ತಿರುವ ಕೇಂದ್ರ ಸರ್ಕಾರ, ವೇತನ ಪರಿಷ್ಕರಣೆ ಮಾಡುವ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಹಾಗಾಗಿ ಮುಷ್ಕರ ಅನಿವಾರ್ಯವಾಗಿದ್ದು, ಈ ಎರಡು ದಿನ ಸಾರ್ವಜನಿಕರು ನಮಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

loader