ಖುದ್ವಾನಿಯಲ್ಲಿ ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂಧಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಉಗ್ರನನ್ನು ಬಂಧಿಸುವಲ್ಲಿ ಭದ್ರತಾ ಪಡೆಗಳು ಸಫಲವಾಗಿವೆ.
ಶ್ರೀನಗರ(ಸೆ.11): ಜಮ್ಮು ಕಾಶ್ಮೀರದ ಕುಲ್ಗಾಮ್'ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನ ಭಾರತೀಯ ಸೇನೆ ಹೊಡೆದುರುಳಿಸಿದೆ.
ಖುದ್ವಾನಿಯಲ್ಲಿ ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂಧಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಉಗ್ರನನ್ನು ಬಂಧಿಸುವಲ್ಲಿ ಭದ್ರತಾ ಪಡೆಗಳು ಸಫಲವಾಗಿವೆ.
ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಲಿಯಾದ ಉಗ್ರರನ್ನು ಹಿಜ್ಬುಲ್ ಮುಂಜಾಹಿದ್ದೀನ್ ಸಂಘಟನೆಯ ದಾವೂದ್ ಅಹ್ಮದ್ ಅಲಿ ಮತ್ತು ಶೈಯಾರ್ ಅಹ್ಮದ್ ವಾನಿ ಎಂದು ಗುರುತಿಸಲಾಗಿದೆ. ಇನ್ನು ಬಂಧಿತ ಉಗ್ರನನ್ನು ಆರೀಫ್ ಸೂಫಿ ಎಂದು ಗುರುತಿಸಲಾಗಿದೆ. ಇದೇ ವೇಳೆ ಉಗ್ರರಿಂದ ಒಂದು ಎ.ಕೆ 47 ಹಾಗೂ ಒಂದು ಇನ್'ಸಾನ್ ರೈಫಲ್ ವಶಪಡಿಸಿಕೊಳ್ಳಲಾಗಿದೆ.
ಇನ್ನು ಕುಪ್ವಾರ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟಕ್ಕೆ ಮೂವರು ಯೋಧರು ಗಾಯಗೊಂಡಿದ್ದಾರೆ.