ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್'ನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಸೇನೆಯು ಹೊಡೆದುರುಳಿಸಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾರೆ.
ಅನಂತ್’ನಾಗ್, ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಸೇನೆಯು ಹೊಡೆದುರುಳಿಸಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾರೆ.
ಲಷ್ಕರೆ ತೊಯ್ಬಾ ಸಂಘಟನೆಗೆ ಸೇರಿದ ಉಗ್ರರಿಬ್ಬರು ದೈಲ್ಗಾಮ್ ಗ್ರಾಮದ ಕಟ್ಟಡವೊಂದರಲ್ಲಿ ಅವಿತಿದ್ದರು. ಸೇನೆಯುಯು ಆ ಪ್ರದೇಶವನ್ನು ಸುತ್ತುವರಿದಾಗ ಉಗ್ರರು ಗುಂಡಿನ ದಾಳಿಯನ್ನು ಆರಂಭಿಸಿದ್ದಾರೆ. ಪ್ರತಿಯಾಗಿ ಯೋಧರು ನಡೆಸಿದ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಹತರಾದ ಉಗ್ರರನ್ನು ಲಷ್ಕರೆ ತೊಯ್ಬಾ ಕಮಾಂಡರ್ ಬಶೀರ್ ಲಷ್ಕರಿ ಹಾಗು ಆಝಾದ ಮಲಿಕ್ ಎಂದು ಗುರುತಿಸಲಾಗಿದೆ.
ಗುಂಡಿನ ಚಕಮಕಿಯಲ್ಲಿ ತಾಹಿರ ಬೇಗಂ ಎಂಬ ಮಹಿಳೆ ಮೃತಪಟ್ಟಿದ್ದಾರೆ.
(ಸಾಂದರ್ಭಿಕ ಚಿತ್ರ)
