ಕಳೆದ ಡಿ.26 ರಂದು ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿಯಾಗಿರುವ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್.ಪಿ. ತ್ಯಾಗಿ ಅವರಿಗೆ ನ್ಯಾಯಾಲಯವು ಜಾಮೀನು ನೀಡಿತ್ತು.  

ನವದೆಹಲಿ (ಜ.04): ಅಗಸ್ಟಾ ವೆಸ್ಟ್’ಲ್ಯಾಂಡ್ ಹಗರಣ ಪ್ರಕರಣದಲ್ಲಿ ವಾಯುಪಡೆ ಮಾಜಿ ಮುಖ್ಯಸ್ಥ ಎಸ್.ಪಿ.ತ್ಯಾಗಿ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಹಾಗೂ ವಕೀಲ ಗೌತಮ್ ಗೆ ಇಲ್ಲಿಯ ಸ್ಥಳೀಯ ನ್ಯಾಯಾಲಯ ಇಂದು ಜಾಮೀನು ನೀಡಿದೆ.

ಸಾಕ್ಷಿದಾರರನ್ನು ಸಂಪರ್ಕಿಸುವುದಾಗಲಿ ಹಾಗೂ ರಾಜಧಾನಿಯನ್ನು ಬಿಟ್ಟು ಹೊರಹೋಗದಂತೆ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಸೂಚಿಸಿದೆ.

ಕಳೆದ ಡಿ.26 ರಂದು ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿಯಾಗಿರುವ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್.ಪಿ. ತ್ಯಾಗಿ ಅವರಿಗೆ ನ್ಯಾಯಾಲಯವು ಜಾಮೀನು ನೀಡಿತ್ತು.

ವಾಯುಪಡೆಯ ಮುಖ್ಯಸ್ಥರಾಗಿದ್ದಾಗ ಅಗಸ್ಟಾ ವೆಸ್ಟ್’ಲ್ಯಾಂಡ್ ಹೆಲಿಕಾಪ್ಟರ್ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪ ತ್ಯಾಗಿ ಅವರ ಮೇಲಿದೆ.