ಆನಂದನಗರದ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಸ್ಟಂಟ್ ಮಾಡಲು ಹೋದಾಗ ಆಯತಪ್ಪಿ ಬೈಕ್ ಕಂಬಕ್ಕೆ ಡಿಕ್ಕಿಹೊಡೆದ ರಭಸಕ್ಕೆ, ಸವಾರರ ತಲೆ ಕಂಬಕ್ಕೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿ(ನ.07): ಬೈಕ್ ಸ್ಟಂಟ್ ಮಾಡಲು ಹೋಗಿ ಆಯತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಆನಂದ್ ನಗರದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತರನ್ನು ೧೭ ವರ್ಷದ ಇಮ್ರಾನ್ ಮಕಾಂದಾರ್, ಕಲೀಮ್ ಶೇಖ್ ಎಂದು ಗುರುತಿಸಲಾಗಿದೆ. ಆನಂದನಗರದ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಸ್ಟಂಟ್ ಮಾಡಲು ಹೋದಾಗ ಆಯತಪ್ಪಿ ಬೈಕ್ ಕಂಬಕ್ಕೆ ಡಿಕ್ಕಿಹೊಡೆದ ರಭಸಕ್ಕೆ, ಸವಾರರ ತಲೆ ಕಂಬಕ್ಕೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪೋಲೀಸರು ಭೇಟಿ ನೀಡಿ, ಮೃತದೇಹಗಳನ್ನ ಹುಬ್ಬಳ್ಳಿಯ ಕಿಮ್ಸ್ ಶವಗಾರಕ್ಕೆ ಸಾಗಿಸಿದ್ದು, ಮೃತರ ಕುಟುಂಬದವರ ಅಕ್ರಂದನ ಮುಗಿಲುಮುಟ್ಟಿದೆ.