ಯುವತಿ ಈ ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆ ಇಬ್ಬರು ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು(ಜ. 07): ನಗರದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಒಂದಾದ ಮೇಲೊಂದರಂತೆ ಬೆಳಕಿಗೆ ಬರುತ್ತಲೇ ಇವೆ. ಸೆಲ್ಫಿ ತೆಗೆಯಲು ನಿರಾಕರಿಸಿದಳೆಂಬ ಅಲ್ಪ ಕಾರಣಕ್ಕೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜನವರಿ 3ರಂದು ಯುವತಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಇಬ್ಬರು ಯುವಕರು ಎದುರುಗೊಳ್ಳುತ್ತಾರೆ. ಕುಡಿತದ ನಶೆಯಲ್ಲಿದ್ದ ಯುವಕರು ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತೆ ಆಕೆಯನ್ನು ಪೀಡಿಸುತ್ತಾರೆ. ಇದಕ್ಕೆ ಆ ಯುವತಿ ನಿರಾಕರಿಸಿದಾಗ ಕಾಮುಕರು ಕೋಪೋದ್ರಿಕ್ತರಾಗಿ ಆಕೆಯನ್ನು ಎಳೆದಾಡುತ್ತಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ.
ಯುವತಿ ಈ ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆ ಇಬ್ಬರು ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.