ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯಿಂದ ಅಮೆರಿಕಾ ಹೊರಕ್ಕೆ

First Published 20, Jun 2018, 12:00 PM IST
U.S. Withdraws from United Nations Human Rights Council
Highlights

ದೇಶದೊಳಕ್ಕೆ ಅಕ್ರಮವಾಗಿ ನುಸುಳುವ ಕುಟುಂಬಗಳಿಂದ ಅವರ ಮಕ್ಕಳನ್ನು ಪ್ರತ್ಯೇಕಿಸುವ ಅಮೆರಿಕ ಸರ್ಕಾರದ ನಿಲುವನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥ ಟೀಕಿಸಿದ ಬೆನ್ನಲ್ಲೇ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮಂಡಳಿಯಿಂದ ಹೊರ ಹೋಗಲು ಟ್ರಂಪ್ ಆಡಳಿತ ನಿರ್ಧರಿಸಿದೆ.  

ವಾಷಿಂಗ್ಟನ್ (ಜೂ. 20): ದೇಶದೊಳಕ್ಕೆ ಅಕ್ರಮವಾಗಿ ನುಸುಳುವ ಕುಟುಂಬಗಳಿಂದ ಅವರ ಮಕ್ಕಳನ್ನು ಪ್ರತ್ಯೇಕಿಸುವ ಅಮೆರಿಕ ಸರ್ಕಾರದ ನಿಲುವನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥ ಟೀಕಿಸಿದ ಬೆನ್ನಲ್ಲೇ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮಂಡಳಿಯಿಂದ ಹೊರ ಹೋಗಲು ಟ್ರಂಪ್ ಆಡಳಿತ ನಿರ್ಧರಿಸಿದೆ.

ಅಮೆರಿಕದ ಕಾಲ ಮಾನದ ಪ್ರಕಾರ ಮಂಗಳವಾರ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ) ನಡೆಯಲಿರುವ ಮಾನವ ಹಕ್ಕುಗಳ ಮಂಡಳಿಯಲ್ಲಿ ಅಮೆರಿಕದ ವಿದೇಶಾಂಗ ಸಚಿವ ಮೈಕ್ ಪೊಂಪೆ ಮತ್ತು ವಿಶ್ವಸಂಸ್ಥೆಗೆ ಅಮೆರಿಕದ ಪ್ರತಿನಿಧಿ ನಿಕ್ಕಿ ಹ್ಯಾಲೆ ಅವರು ಜಂಟಿಯಾಗಿ ಈ ಘೋಷಣೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ರೇಲ್ ಬಗ್ಗೆ ಪಕ್ಷಪಾತ ಧೋರಣೆ ಅನುಸರಿಸುವ ಮಾನವ ಹಕ್ಕುಗಳ ಮಂಡಳಿಯಿಂದ ಹೊರ ಹೋಗುವುದಾಗಿ ಹ್ಯಾಲೆ ಕಳೆದ ವರ್ಷವಷ್ಟೇ ಗುಟುರು ಹಾಕಿದ್ದರು. 

loader