ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್'ಗೆ ತೆರಳಿರುವ ರಾಜ್ಯದ ಆಹಾರ ಸಚಿವ ಯು.ಟಿ.ಖಾದರ್ ಅವರ ಪ್ರಚಾರದ ವಿಡಿಯೋವೊಂದು ಸದ್ಯ ಸಾಮಾಜಿಕ ತಾಣಗಳಲ್ಲಿ ಭಾರೀ ಅಪಹಾಸ್ಯಕ್ಕೆ ಗುರಿಯಾಗಿದೆ.
ಗುಜರಾತ್ (ಡಿ.07): ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್'ಗೆ ತೆರಳಿರುವ ರಾಜ್ಯದ ಆಹಾರ ಸಚಿವ ಯು.ಟಿ.ಖಾದರ್ ಅವರ ಪ್ರಚಾರದ ವಿಡಿಯೋವೊಂದು ಸದ್ಯ ಸಾಮಾಜಿಕ ತಾಣಗಳಲ್ಲಿ ಭಾರೀ ಅಪಹಾಸ್ಯಕ್ಕೆ ಗುರಿಯಾಗಿದೆ.
ಗುಜರಾತ್'ನ ಕಾಂಗ್ರೆಸ್ ಅಭ್ಯರ್ಥಿಯೊಬ್ಬರ ಪರವಾಗಿ ಖಾದರ್ ಫೀಲ್ಡಿಗಿಳಿದು ಪ್ರಚಾರದಲ್ಲಿ ತೊಡಗಿದ್ದು, ರಸ್ತೆಯಲ್ಲಿ ಜನರೇ ಇಲ್ಲದೇ ಇದ್ದರೂ ಕೈ ಬೀಸುತ್ತಾ ಇರುವ ದೃಶ್ಯವನ್ನು ಸಾಮಾಜಿಕ ತಾಣಗಳಲ್ಲಿ ಅಪಹಾಸ್ಯ ಮಾಡಲಾಗಿದೆ. ಕೆಲವೇ ಕೆಲವು ಕಾರ್ಯಕರ್ತರು ಮತ್ತು ಅಭ್ಯರ್ಥಿ ಜೊತೆ ಖಾದರ್ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಖಾಲಿ ರಸ್ತೆಗೆ ಕೈ ಬೀಸುತ್ತಾ ಇರುವ ದೃಶ್ಯ ವೈರಲ್ ಆಗಿದೆ. ಈ ವೀಡಿಯೋವನ್ನ ಬಳಸಿಕೊಂಡು ಕೆಲವರು ಸಾಮಾಜಿಕ ತಾಣಗಳಲ್ಲಿ ಟೀಕೆ ಮತ್ತು ಅಪಹಾಸ್ಯ ಆರಂಭಿಸಿದ್ದಾರೆ. ಮಾಹಿತಿಯ ಪ್ರಕಾರ ಖಾದರ್ ಗುಜರಾತ್ ನ ಸೂರತ್ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದರು ಎನ್ನಲಾಗಿದೆ.
