ಅಯೋಧ್ಯೆಯಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ| ನೂತನ ಸಂಸದರೊಂದಿಗೆ ರಾಮಲಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ| ತಂದೆ ಉದ್ಧವ್ ಠಾಕ್ರೆಗೆ ಪುತ್ರ ಆದಿತ್ಯ ಠಾಕ್ರೆ ಸಾಥ್| ರಾಮ ಮಂದಿರ ನಿರ್ಮಾಣಕ್ಕೆ ಇದು ಸಕಾಲ ಎಂದ ಶಿವಸೇನಾ ಮುಖ್ಯಸ್ಥ| ಸುಗ್ರೀವಾಜ್ಞೆ ಜಾರಿಯ ಮೂಲಕ ಮಂದಿರ ನಿರ್ಮಾಣಕ್ಕೆ ಆಗ್ರಹ| 

ಅಯೋಧ್ಯೆ(ಜೂ.16): ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ತಮ್ಮ 18 ನೂತನ ಸಂಸದರೊಂದಿಗೆ ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ, ಇಂದು ಅಯೋಧ್ಯೆಯಲ್ಲಿನ ರಾಮಲಲ್ಲಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Scroll to load tweet…

ಪುತ್ರ ಅದಿತ್ಯ ಜೊತೆಗೆ ಉದ್ಧವ್ ಠಾಕ್ರೆ ಅಯೋಧ್ಯೆಗೆ ಬಂದಿಳಿದ ಉದ್ಧವ್, ಸಂಸದರೊಂದಿಗೆ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

Scroll to load tweet…

ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇದು ಸಕಾಲ ಎಂದು ಅಭಿಪ್ರಾಯಪಟ್ಟರು.

Scroll to load tweet…

ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಉದ್ಧವ್ ಆಭಿಪ್ರಾಯಪಟ್ಟರು.