ಲಂಡನ್‌: ಭಾರತದಲ್ಲಿ ಹವಾಮಾನ ಇಲಾಖೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡುವುದು ತೀರಾ ಸಾಮಾನ್ಯ. ಆದರೆ, ಬ್ರಿಟನ್‌ನ ಹವಾಮಾನ ಇಲಾಖೆ 164 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಗುಡುಗು ಸಿಡಿಲಿನ ಎಚ್ಚರಿಕೆ ನೀಡಿದೆ. 

ನೈಋುತ್ಯ ಇಂಗ್ಲೆಂಡ್‌ ಮತ್ತು ವೇಲ್ಸ್‌ನ ಕೆಲವು ಕಡೆಗಳಲ್ಲಿ ಭಾನುವಾರ ಗುಡುಗು ಹಾಗೂ ಸಿಡಿಲಿನಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ. ಬಿರುಗಾಳಿ ಬೀಸುವ ಹಿನ್ನೆಲೆಯಲ್ಲಿ ವಾಹನ ಚಾಲನೆ ಅಪಾಯಕಾರಿ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಂದಹಾಗೆ ಬ್ರಿಟನ್‌ನಲ್ಲಿ ಕಳೆದ ತಿಂಗಳಷ್ಟೇ ಗುಡುಗು- ಸಿಡಿಲಿನ ಬಗ್ಗೆ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆಯಂತೆ.