ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಇಂದು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಚಿವೆ ನಂತರ ಉಮಾಶ್ರೀ ವೇದಿಕೆಯಲ್ಲಿ ಆಸೀನರಾಗಿದ್ದರು.
ಬಾಗಲಕೋಟೆ(ಫೆ.27): ನೋಟ್ ಬ್ಯಾನ್ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವೆ ಉಮಾಶ್ರೀ ದಿಢೀರನೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ.
ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಇಂದು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಚಿವೆ ನಂತರ ಉಮಾಶ್ರೀ ವೇದಿಕೆಯಲ್ಲಿ ಆಸೀನರಾಗಿದ್ದರು. ಈ ವೇಳೆ ಸಚಿವೆ ತಕ್ಷಣ ಅಸ್ವಸ್ಥ ರಾದರು. ತಕ್ಷಣ ಸ್ಥಳೀಯ ತಾಲೂಕು ಆಸ್ಪತ್ರೆ ವೈದ್ಯೆ ಕುಸುಮಾ ಸ್ಥಳಕ್ಕೆ ಧಾವಿಸಿ ಆರೋಗ್ಯ ವಿಚಾರಿಸಿದರು.ಬಳಿಕ ವೈದ್ಯರು ವಿಶ್ರಾಂತಿ ಅಗತ್ಯತೆ ಹೇಳಿದ ಪರಿಣಾಮ ವಾಹನದ ಮೂಲಕ ತಾಲೂಕ ಆಸ್ಪತ್ರೆಗೆ ಉಮಾಶ್ರೀ ಅವರು ದಾಖಲಾಗಿ ಚಿಕಿತ್ಸೆ ಪಡೆದರು.ಈಗ ಗುಣಮುಖರಾಗಿದ್ದು, ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ದೃಢಪಡಿಸಿದ್ದಾರೆ.
