ಇದೇ ವೇಳೆ ಬಿಜೆಪಿಗರು ಹರಾಮ್ ಕೋರರು ಎಂದು ಕಿಡಿಕಾರಿದ್ದಾರೆ. ಈ ರೀತಿ ಬಿಜೆಪಿ ವಿರುದ್ಧ ಹೇಳಿಕೆ ನೀಡುವ ಮೂಲಕ ಬಿಜೆಪಿ ವಿರುದ್ಧ ತಿರುಗಿ ಬಿದ್ರಾ ಮಾತುಗಳು ಕೇಳಿ ಬರುತ್ತಿವೆ.

ಬೆಂಗಳೂರು(ಡಿ.08): ಕೆಲದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಮಾಜಿ ಸಚಿವ ಉಮೇಶ್ ಕತ್ತಿ ಭೇಟಿ ಬೆನ್ನಲ್ಲೇ ಹೊಸ ರಾಜ್ಯ ರಾಜಕೀಯ ಹೊಸ ಸಂಚಲನ ಸೃಷ್ಟಿಯಾಗಿದೆ. ಇದೀಗ ಬಿಜೆಪಿ ನಾಯಕ ಉಮೇಶ್ ಕತ್ತಿ ಬಿಜೆಪಿ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

ನಾನು ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ. ಆದರೆ ಜಾತಿಯಲ್ಲಿ ನಾನು ಲಿಂಗಾಯಿತ ಎಂದು ಕತ್ತಿ ಹೇಳಿದ್ದಾರೆ. ಒಂದು ವೇಳೆ ನಾನು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೆಂಬಲ ಸೂಚಿಸಿದರೆ ನನಗೆ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇದೇ ವೇಳೆ ಬಿಜೆಪಿಗರು ಹರಾಮ್ ಕೋರರು ಎಂದು ಕಿಡಿಕಾರಿದ್ದಾರೆ. ಈ ರೀತಿ ಬಿಜೆಪಿ ವಿರುದ್ಧ ಹೇಳಿಕೆ ನೀಡುವ ಮೂಲಕ ಬಿಜೆಪಿ ವಿರುದ್ಧ ತಿರುಗಿ ಬಿದ್ರಾ ಮಾತುಗಳು ಕೇಳಿ ಬರುತ್ತಿವೆ.

ಅಷ್ಟಕ್ಕೂ ಉಮೇಶ್ ಕತ್ತಿ ಏನಂದ್ರೂ ಅಂತ ನೀವೇ ಕೇಳಿ..

ಈ ಬಗ್ಗೆ ಪ್ರತಿಕ್ರಿಯೆ ನೀಡಲು ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.