Asianet Suvarna News Asianet Suvarna News

ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂದು ಪಾಕ್ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ ವಿಶ್ವಸಂಸ್ಥೆ

un rejects pak plea to resolve kashmir dispute

ವಿಶ್ವಸಂಸ್ಥೆ(ಸೆ. 22): ಜಮ್ಮು-ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂದು ಪಾಕಿಸ್ತಾನ ಮಾಡಿಕೊಂಡ ಮನವಿಯನ್ನು ವಿಶ್ವಸಂಸ್ಥೆ ತಿರಸ್ಕರಿಸಿದೆ. ಪಾಕಿಸ್ತಾನ ಮತ್ತು ಭಾರತ ದೇಶಗಳು ಕಾಶ್ಮೀರ ಸೇರಿದಂತೆ ತಮ್ಮ ಮಧ್ಯೆ ಇರುವ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕೀ-ಮೂನ್ ಕರೆ ನೀಡಿದ್ದಾರೆ.

ವಿಶ್ವಸಂಸ್ಥೆಯ 71ನೇ ಅಧಿವೇಶನದ ವೇಳೆ ಬಾನ್ ಕೀ ಮೂನ್ ಈ ಸಲಹೆ ನೀಡಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ದೇಶಗಳ ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮೂಲಕ ಇತ್ಯರ್ಥ ಮಾಡಿಕೊಳ್ಳುವುದು ಎರಡೂ ದೇಶಗಳ ಹಾಗೂ ಇಡಿಯ ದಕ್ಷಿಣ ಏಷ್ಯಾ ಪ್ರದೇಶದ ಹಿತಾಸಕ್ತಿಗೆ ಒಳ್ಳೆಯದು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳು ಕಿವಿ ಮಾತು ಹೇಳಿದ್ದಾರೆ.

ಈ ಮೂಲಕ ಕಾಶ್ಮೀರ ವಿಚಾರವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರಸ್ತಾಪಿಸಿ ತೃತೀಯ ಶಕ್ತಿಯ ಮಧ್ಯಪ್ರವೇಶಕ್ಕೆ ಪಾಕ್ ಮಾಡಿದ ಪ್ರಯತ್ನ ಮತ್ತೊಮ್ಮೆ ವಿಫಲವಾಗಿದೆ. ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಈ ಮೊದಲು ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಅದಕ್ಕೆ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ವಿಶ್ವಸಂಸ್ಥೆಗೆ ನೀಡಿದ್ದರು. ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ತಂಡವೊಂದನ್ನು ಕಳುಹಿಸಬೇಕೆಂದೂ ವಿಶ್ವಸಂಸ್ಥೆಗೆ ಮನವಿ ಮಾಡಿಕೊಂಡಿದ್ದರು.

Latest Videos
Follow Us:
Download App:
  • android
  • ios