ಕಾಂಗ್ರೆಸ್ ಹಾಗೂ ಜೆಡಿಎಸ್ ಈಗಾಗಲೇ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿ ಆಡಳಿತ ನಡೆಸುತ್ತಿವೆ. ಆದರೆ ಮುಂದಿನ ಲೋಕಸಭಾ ಚುನಾವಣೆಗೆ ಇವರ ಮೈತ್ರಿ ಮುಂದುವರಿಯುತ್ತಾ ಎನ್ನುವುದು ಪಕ್ಷಗಳ ನಡೆಯ ಮೇಲೆ ಅವಲಂಬಿತವಾಗಿದೆ. 

ಬೆಂಗಳೂರು : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿಯು ಆ ಪಕ್ಷದ ನಡೆಯ ಮೇಲೆ ಅವಲಂಬಿತವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸಲ್ಲಿ ಪರ-ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಹೇಳಿಕೆಯು ಮಹತ್ವ ಪಡೆದುಕೊಂಡಿದೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿ ಕೊಂಡು ಸರ್ಕಾರ ರಚನೆ ಮಾಡಲಾಗಿದೆ. ಇದು ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರಿಯಬೇಕು ಎಂಬುದು ನನ್ನ ಆಪೇಕ್ಷೆ. ಆದರೆ, ಈ ಹೊಂದಾಣಿಕೆಯು ಕಾಂಗ್ರೆಸ್ ನಡೆಯ ಮೇಲೆ ಅವಲಂಬಿತವಾ ಗಿದೆ ಎಂದರು.

ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಿ ನಿಂದ ಎದುರಿಸಲು ಎಡರಂಗದ ಪಕ್ಷಗಳು ಈಗಾಗಲೇ ಮಾತುಕತೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಕಾರ್ಯಚಟುವಟಿಕೆಗಳು ನಡೆ ಯುತ್ತಿವೆ. ಆದರೆ, ಕಾಂಗ್ರೆಸ್ ನಡೆ ಏನೆಂಬುದು ಸ್ಪಷ್ಟಪಡಿಸಬೇಕು. ಅಲ್ಲದೆ ಕಾಂಗ್ರೆಸ್‌ನ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲು ಬೆಂಬಲ ನೀಡುವುದಾಗಿ ಜೆಡಿಎಸ್ ವರಿಷ್ಠ ನಾಯಕ ಎಚ್.ಡಿ. ದೇವೇಗೌಡ ಅವರು ಹೇಳಿದ್ದು, ಈ ಬಗ್ಗೆ ಈಗಾಗಲೇ ಮಾತುಕತೆ ಕೂಡ ನಡೆದಿದೆ ಎಂದರು. ಕಾಂಗ್ರೆಸ್ ನಾಯಕರು ಮೈತ್ರಿಗೆ ಸಹಮತ ವ್ಯಕ್ತಪಡಿ ಸಿದರೆ ಮಾತ್ರ ಲೋಕಸಭೆ ಚುನಾವಣೆಯನ್ನು ಮೈತ್ರಿ ಯೊಂದಿಗೆ ಎದುರಿಸಲಾಗುವುದು ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಸಂದೇಶ ರವಾನಿಸಿದರು.