ನವದೆಹಲಿ(ಜೂ.27): ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಆಪ್ ಸರ್ಕಾರದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಿಸ್ಕರಿಸಿದೆ.

ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ವಸತಿ ಮತ್ತು ನಗರ ವ್ಯವಹಾರ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ, ದೆಹಲಿ ಮೆಟ್ರೋದಲ್ಲಿ ಮಹಿಳೆಯರೂ ಸೇರಿದಂತೆ ಯಾವುದೇ ಪ್ರಯಾಣಿಕರಿಗೂ ಉಚಿತ ಪ್ರಯಾಣ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ದೆಹಲಿ ಮೆಟ್ರೋ ಸಂಸ್ಥೆಯಲ್ಲಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ಪಾಲುದಾರಿಕೆ ಸಮನಾಗಿದ್ದು, ಎರಡೂ ಸರ್ಕಾರಗಳು ಶೇ.50ರಷ್ಟು ವೆಚ್ಚ ಭರಿಸಿವೆ. ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಏಕಾಂಗಿಯಾಗಿ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ.

ಈ ಪರಿಣಾಮ ಮಹಿಳೆಯರಿಗೆ ಉಚಿತ ಪ್ರಯಾಣದ ಪ್ರಸ್ತಾವವನ್ನು ಆಪ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ರವಾನಿಸಿತ್ತು. ಕೇಂದ್ರ ಸರ್ಕಾರ ಇದೀಗ ದೆಹಲಿ ಸರ್ಕಾರದ ಪ್ರಸ್ತಾವವನ್ನು ತಿರಸ್ಕರಿಸಿದ್ದು, ಉಚಿತ ಪ್ರಯಾಣದ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.