ಅಹಮದಾಬಾದ್‌ (ಸೆ. 05): ಕತ್ತಿನ ಹಿಂಭಾಗದಲ್ಲಿ ಆಗಿದ್ದ ಗಡ್ಡೆ ತೆಗೆಯುವ ಸಲುವಾಗಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಪಟ್ಟರು.

ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಅವರು ಆಸ್ಪತ್ರೆಯಿಂದ ಬುಧವಾರವೇ ಬಿಡುಗಡೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಖಾಸಗಿ ಕೆ.ಡಿ ಆಸ್ಪತ್ರೆಗೆ 9 ಗಂಟೆಗೆ ಭೇಟಿ ನೀಡಿದ ಶಾ ಅವರಿಗೆ ಶಸ್ತ್ರಚಿಕಿತ್ಸೆ ನೀಡಿ ಮಧ್ಯಾಹ್ನ 12.30ಕ್ಕೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಬುಧವಾರ ಗುಜರಾತ್‌ನಲ್ಲೇ ಉಳಿದುಕೊಳ್ಳಲಿರುವ ಶಾ ಗುರುವಾರ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.