Asianet Suvarna News Asianet Suvarna News

ಕನ್ನಡದ ಬಗ್ಗೆ ಮಾತನಾಡುವ ಭರದಲ್ಲಿ ಅನಂತ್ ಕುಮಾರ್ ಹೆಗಡೆ ಎಡವಟ್ಟು

  ಕನ್ನಡ ಭಾಷಾ ಪ್ರೇಮದ ಬಗ್ಗೆ ಮಾತನಾಡೋ ಭರದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

Union Minister Ananth Kumar Hegde Controversial Statement

ಮಂಗಳೂರು (ಫೆ.17):  ಕನ್ನಡ ಭಾಷಾ ಪ್ರೇಮದ ಬಗ್ಗೆ ಮಾತನಾಡೋ ಭರದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಇಂಗ್ಲಿಷ್‌ ಅನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದಿನ ಸವಾಲು. ಶುದ್ಧ ಕನ್ನಡ ಯಾರಲ್ಲೂ ಇಲ್ಲ. ಎಲ್ಲೋ ಒಂದು ಕಡೆ ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಪ್ರದೇಶದವರನ್ನು ಹೊರತುಪಡಿಸಿದರೆ ಇತರರಿಗೆ ಆ ಯೋಗ್ಯತೆಯೇ ಇಲ್ಲ ಎನ್ನುವ ಮೂಲಕ ಕೇಂದ್ರ ಕೌಶಲ್ಯ ಅಭಿವೃದ್ದಿ ಸಚಿವ ಅನಂತ ಕುಮಾರ್ ಹೆಗಡೆ ವಿವಾದ ಸೃಷ್ಟಿಸಿದ್ದಾರೆ. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ ಅಡಿಯಲ್ಲಿ ಆರಂಭಿಸಲಾದ ಉಚಿತ ತಾಂತ್ರಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನ ಪರಿಸ್ಥಿತಿಯಂತೂ ಕೇಳುವುದೇ ಬೇಡ. ಅಲ್ಲಿನ ಸ್ಥಿತಿ ಚಿಂತಾ‌ಜನಕವಾಗಿದೆ. ಬೇಸಿಕ್ ಸ್ಕಿಲ್ ಇಲ್ಲದ ಸಿದ್ದಣ್ಣ ಸರಕಾರ ಇದೆ. ರೀಜನಲ್ ಸ್ಕಿಲ್ ಗ್ಯಾಪ್ ಎನಾಲಿಸಿಸ್ ಮಾಡಲು ಕೇಂದ್ರ ಸರಕಾರ ನಮ್ಮ ರಾಜ್ಯ ಸರಕಾರಕ್ಕೆ ಅನುದಾನ ನೀಡಿದೆ. ಅದನ್ನು ನಮ್ಮ ಸಿದ್ದಣ್ಣ ಸರಕಾರ ಹೇಗೆ ಬಳಸುತ್ತದೋ ನೋಡಬೇಕು. ಬೇಸಿಕ್ ಸ್ಕಿಲ್ ಇಲ್ಲದವರು ಏನು ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. ಆದರೆ  ಕನ್ನಡದ ಬಗ್ಗೆ ಮಾತನಾಡೋ ಭರದಲ್ಲಿ ಬೇರೆ ಜಿಲ್ಲೆಯ ಜನರನ್ನು ಕೀಳಾಗಿ ಕಂಡಿರೋದು ಇದೀಗ ವಿವಾದಕ್ಕೆ ಕಾರಣವಾಗಿದೆ.
 

Follow Us:
Download App:
  • android
  • ios