ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್‌ ಅವರನ್ನೇ ಕಾರಿನಲ್ಲಿ ಹೋಗುತ್ತಿದ್ದ ಗುಂಪೊದು ಅವಹೇಳನಕಾರಿಯಾಗಿ ಚುಡಾಯಿಸಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಬಗ್ಗೆ ಅನುಪ್ರಿಯಾ ನಂತರ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

ವಾರಾಣಸಿ (ಜೂ. 13): ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್‌ ಅವರನ್ನೇ ಕಾರಿನಲ್ಲಿ ಹೋಗುತ್ತಿದ್ದ ಗುಂಪೊದು ಅವಹೇಳನಕಾರಿಯಾಗಿ ಚುಡಾಯಿಸಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಲೋಕಸಭಾ ಕ್ಷೇತ್ರ ಮಿರ್ಜಾಪುರದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ, ಅನುಪ್ರಿಯಾ ಅವರು ವಾರಾಣಸಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಂಬರ್‌ಪ್ಲೇಟ್‌ ಇಲ್ಲದ ಕಾರಿನಲ್ಲಿ ಚಲಿಸುತ್ತಿದ್ದ ಮೂವರ ಗುಂಪು ಸಚಿವರ ವಾಹನವನ್ನು ಹಿಂದಿಕ್ಕುವ ಯತ್ನ ಮಾಡಿತ್ತು. ಈ ವೇಳೆ ಸಚಿವರ ಬೆಂಗಾವಲು ಪಡೆಯ ಸಿಬ್ಬಂದಿ ಎಚ್ಚರಿಕೆ ನೀಡಿದರೂ ಆಲಿಸಿದ ಗುಂಪು ಎಚ್ಚರಿಕೆಯನ್ನು ನಿರ್ಲಕ್ಷಿಸಿದ್ದೂ ಅಲ್ಲದೆ, ಸಚಿವೆ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಪರಾರಿಯಾಗಿದೆ.

ಘಟನೆ ಬಗ್ಗೆ ಅನುಪ್ರಿಯಾ ನಂತರ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ವರ್ಷ ದೆಹಲಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ವಿರುದ್ಧವೂ ನಾಲ್ವರು ಯುವಕರ ಗುಂಪು ಇದೇ ರೀತಿಯ ವರ್ತನೆ ತೋರಿತ್ತು. ಕುಡಿದ ಮತ್ತಿನಲ್ಲಿದ್ದ ನಾಲ್ವರನ್ನೂ ಬಳಿಕ ವಶಕ್ಕೆ ಪಡೆಯಲಾಗಿತ್ತು.