ರಾಷ್ಟ್ರಗೀತೆ ಹಾಡುವಾಗ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ| ಮಹಾರಾಷ್ಟ್ರದ ಸೋಲಾಪುರದ ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಳ್ಕರ್ ವಿವಿಯಲ್ಲಿ ಘಟನೆ| ಸ್ಥಳದಲ್ಲೇ ವೈದ್ಯರಿಂದ ನಿತಿನ್ ಗಡ್ಕರಿ ಆರೋಗ್ಯ ಪರಿಶೀಲನೆ| ಅನಾರೋಗ್ಯದ ಹಿನ್ನೆಲೆಯಲ್ಲಿ ಗಡ್ಕರಿ ಅವರಎಲ್ಲಾ ಕಾರ್ಯಕ್ರಮಗಳು ರದ್ದು|

ಸೋಲಾಪುರ(ಆ.01): ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿರುವ ನಿತಿನ್ ಗಡ್ಕರಿ, ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಳ್ಕರ್ ಸೋಲಾಪುರ ವಿವಿಯಲ್ಲಿ ನಡೆದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದ ವೇಳೆ ಗಡ್ಕರಿ ಕುಸಿದು ಬಿದ್ದಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ವೈದ್ಯರು ಗಡ್ಕರಿ ಅವರ ಪರಿಶೀಲನೆ ನಡೆಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಗಡ್ಕರಿ ಅವರ ಇನ್ನುಳಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಡಿಸೆಂಬರ್‌ನಲ್ಲಿ ನಾಗ್ಪುರದ ಮಹಾತ್ಮಾ ಪುಲೆ ಕೃಷಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದ ನಿತಿನ್ ಗಡ್ಕರಿ, ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದನ್ನು ಇಲ್ಲಿ ಸ್ಮರಿಸಬಹುದು.