ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ರೂ.25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ.‌ ಅವರು ಭ್ರಷ್ಟಾಚಾರಿಗಳಲ್ಲದೇ ಇದ್ದರೆ ಇಷ್ಟು ದೊಡ್ಡ ಮೊತ್ತದ ಹಣ ಎಲ್ಲಿಂದ ಬರುತ್ತದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ಸರಿಯಾದ ತಿರುಗೇಟು ನೀಡಿದ್ದಾರೆ.

ಬೆಂಗಳೂರು[ಡಿ.30] ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ರೂ.25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ ಎಂಬ ಸಿದ್ದರಾಮಯ್ಯ ಟ್ವೀಟ್‌ಗೆ ಸದಾನಂದ ಗೌಡ ಕೌಂಟರ್ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಬಿಎಸ್‌ವೈ, ಕತ್ತಿ ಅತೃಪ್ತ ಆತ್ಮಗಳು: ಸಿದ್ದು ಕಿಡಿ!

ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿರುವುದು ಒಂದನ್ನು ಬಿಟ್ಟು ವಿರೋಧ ಪಕ್ಷವಾಗಿ ಕರ್ನಾಟಕ ಬಿಜೆಪಿ ಇಷ್ಟು ದಿನ ಬೇರೆ ಏನು ಮಾಡಿದೆ? ಎಂದು ಸಿದ್ದರಾಮಯ್ಯ ಬಿಜೆಪಿ ಕೆಣಕಿದ್ದರು. ಇದಕ್ಕೆ ಪ್ರತಿಯಾಗಿ ದಾಳಿ ಮಾಡಿರುವ ಸದಾನಂದ ಗೌಡ ‘ಕುದುರೆ ಏರಲಾರದವನು ಧೀರನೂ ಅಲ್ಲ ಶೂರನೂ ಅಲ್ಲ . ನಿಮ್ಮ ಪಕ್ಷದ ಹುಳುಕು ಮುಚ್ಚಿ ಹಾಕಿಕ್ಕೊಳ್ಳಲು ಇದೊಂದು ಹೊಸ ಪ್ರಹಸನ . ಮುಲಾಜಿನ ಸರಕಾರ ನಡೆಸಲು ಮುಖ್ಯಮಂತ್ರಿಗಳಿಗೆ ಕೈ ಜೋಡಿಸಿ , ಕನ್ನಡಿಗರು ಮುಗ್ದರು ಮೂರ್ಖರಲ್ಲ ನಿಮ್ಮ ಗಿಲೀಟು ಮಾತು ನಂಬಲು’ ಎಂದು ತಿರುಗೇಟು ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಇಬ್ಬರು ಪ್ರಮುಖ ನಾಯಕರ ಟ್ವೀಟ್ ಮೇಲೆ ಚರ್ಚೆ ಆರಂಭವಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ಸಹ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದರು.

Scroll to load tweet…