ಪ್ರಾಸ್ಟೇಟ್‌ ಗ್ರಂಥಿ ಸಮಸ್ಯೆಯಿಂದಾಗಿ ಹೆಬ್ಬಾಳದ ಸಿಎಂಐ ಆಸ್ಟರ್‌ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಶನಿವಾರ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಬೆಂಗಳೂರು : ಪ್ರಾಸ್ಟೇಟ್‌ ಗ್ರಂಥಿ ಸಮಸ್ಯೆಯಿಂದಾಗಿ ಹೆಬ್ಬಾಳದ ಸಿಎಂಐ ಆಸ್ಟರ್‌ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಶನಿವಾರ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಆಸ್ಪತ್ರೆಯ ಡಾ. ಅವಿನಾಶ್‌ ನೇತೃತ್ವದ ತಜ್ಞರ ತಂಡ ಶನಿವಾರ ಬೆಳಗ್ಗೆ 8.30ಕ್ಕೆ ಶಸ್ತ್ರಚಿಕಿತ್ಸೆ ನಡೆಸಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಡಿ.ವಿ.ಸದಾನಂದಗೌಡ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಮಧ್ಯಾಹ್ನದ ವೇಳೆಗೆ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. 

ಇನ್ನೂ ಎರಡು ದಿನ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದು ಸೋಮವಾರ ಮನೆಗೆ ತೆರಳಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶಸ್ತ್ರಚಿಕಿತ್ಸೆ ನಿಮಿತ್ತ ಸಚಿವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಆರೋಗ್ಯವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.