ನವದೆಹಲಿ: ಶ್ರೀನಗರ: ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡುವ ನಿರ್ಧಾರ ಕೈಗೊಳ್ಳುವುದಕ್ಕೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಅವರನ್ನು ಹರಿ ನಿವಾಸ್ ಅರಮೆನಯಲ್ಲಿ ಗೃಹ ಬಂಧನದಲ್ಲಿ ಇಡಲಾಗಿತ್ತು.

ವರುಣನ ಅಬ್ಬರಕ್ಕೆ ಕರುನಾಡು ತತ್ತರ: ಮಳೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಕ್ಲಿಕ್ಕಿಸಿ

ಆದರೆ, ಇಬ್ಬರ ಮಧ್ಯೆ ವಾಗ್ವಾದ ಏರ್ಪಟ್ಟ ಹಿನ್ನೆಲೆಯಲ್ಲಿ ಇಬ್ಬರೂ ಮುಖಂಡರನ್ನು ಪ್ರತ್ಯೇಕ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು- ಕಾಶ್ಮೀರ ದಲ್ಲಿ ಬಿಜೆಪಿಗೆ ಕಾಲೂರಲು ಅವಕಾಶ ನೀಡಿದವರು ಯಾರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಒಮರ್ ಹಾಗೂ ಮುಪ್ತಿ ಮಧ್ಯೆ ವಾಗ್ವಾದ ಏರ್ಪಟ್ಟಿತ್ತು. ಒಂದು ಹಂತದಲ್ಲಿ ಒಮರ್ ಅಬ್ದುಲ್ಲಾ ಮೆಹಬೂಬಾ ಅವರ ಮೇಲೆ ರೇಗಾಡಿದ್ದಾರೆ. ಮುಫ್ತಿ ಮಹಮ್ಮದ್ ಸಯೀದ್ ಕಾಯಿಲೆ ಬೀಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇ ಕಾರಣ ಎಂದು ಕಿಚಾಯಿಸಿದ್ದಾರೆ.

ಇವರಿಬ್ಬರ ಮಧ್ಯೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿದ ಹಿನ್ನೆಲೆಯಲ್ಲಿ ಒಮರ್ ಅವರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.