ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳುತ್ತದೆ ಎಂದು ಹೇಳಿದ್ದಾರೆ.
ನವದೆಹಲಿ (ಡಿ.28): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳುತ್ತದೆ ಎಂದು ಹೇಳಿದ್ದಾರೆ.
ಅಲ್ಲದೇ ನಾವು ಚುನಾವಣೆಯಲ್ಲಿ ಸೋತರೂ ಸುಳ್ಳನ್ನು ಮಾತ್ರ ಹೇಳುವುದಿಲ್ಲ ಎಂದು ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಏನಾಗುತ್ತಿದೆ.
ರಾಜಕೀಯ ಲಾಭಕ್ಕಾಗಿ ಬಿಜೆಪಿ ಸುಳ್ಳನ್ನೇ ಹೇಳಿಕೊಂಡು ಮುನ್ನಡೆಯುತ್ತಿದೆ. ಆದರೆ ನಾವು ಸುಳ್ಳು ಹೇಳುವುದಿಲ್ಲ. ಇದು ನಮಗೂ ಅವರಿಗೂ ಇರುವ ವ್ಯತ್ಯಾಸವಾಗಿದೆ ಎಂದು ಹೇಳಿದ್ದಾರೆ.
