ಉತ್ತರ ಪ್ರದೇಶ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಬಿಜೆಪಿಯು ಭಾರೀ ಗೆಲುವು ಸಾಧಿಸಿದ ಬೆನ್ನಲ್ಲೇ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಗೆಲುವಿಗೆ ತಿರುಚಲ್ಪಟ್ಟ ಇವಿಎಂಗಳೇ ಕಾರಣವೆಂದು ಅವರು ಪುನರುಚ್ಚರಿಸಿದ್ದಾರೆ.

ಲಕ್ನೋ: ಉತ್ತರ ಪ್ರದೇಶ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಬಿಜೆಪಿಯು ಭಾರೀ ಗೆಲುವು ಸಾಧಿಸಿದ ಬೆನ್ನಲ್ಲೇ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಗೆಲುವಿಗೆ ತಿರುಚಲ್ಪಟ್ಟ ಇವಿಎಂಗಳೇ ಕಾರಣವೆಂದು ಅವರು ಪುನರುಚ್ಚರಿಸಿದ್ದಾರೆ.

2014 ಲೋಕಸಭಾ ಚುನಾವಣೆ, 2017ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗಳಂತೆ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಕೂಡಾ ಇವಿಎಂ ವಂಚನೆ ನಡೆದಿದೆ ಎಂದು ಮಾಯಾವತಿ ಹೇಳಿದ್ದಾರೆ.

ಬಿಜೆಪಿಗೆ ಪ್ರಜಾತಂತ್ರದಲ್ಲಿ ವಿಶ್ವಾಸವಿದ್ದರೆ, ಇವಿಎಂಗಳನ್ನು ಬದಿಗೊತ್ತಿ ಮತಪತ್ರ (ಬ್ಯಾಲೆಟ್) ಮೂಲಕ ಚುನಾವಣೆಗಳನ್ನೆದುರಿಸಲಿ. ಹಾಗೆ ಮಾಡಿದರೆ ಬಿಜೆಪಿಯು ಖಂಡಿತವಾಗಿಯೂ ಅಧಿಕಾರಕ್ಕೆ ಬರಲು ಸಾದಧ್ಯವಿಲ್ಲವೆಂದು ಮಾಯವತಿ ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಬಳಿಕ ಮಾಯಾವತಿ ಇವಿಎಂ ಬಳಕೆಯ ವಿರುದ್ಧ ಆಕ್ಷೇಪಿಸುತ್ತಾ ಬಂದಿದ್ದಾರೆ. ಬಿಜೆಪಿಯು ಇವಿಎಂಗಳನ್ನು ತಿರುಚಿದೆ ಎಂದು ಅವರು ಆರೋಪಿಸಿದ್ದರು. ಆ ಬಳಿಕ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಮತ್ತಿತರ ಪಕ್ಷಗಳು ಕೂಡಾ ಇವಿಎಂ ಬಳಕೆಯನ್ನು ವಿರೋಧಿಸಿದ್ದವು. ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗವು ಇವಿಎಂನ್ನು ಹ್ಯಾಕ್ ಮಾಡಿ ತೋರಿಸುವಂತೆ ರಾಜಕೀಯ ಪಕ್ಷಗಳಿಗೆ ಪಂಥಾಹ್ವಾನವನ್ನು ಕೂಡಾ ನೀಡಿತ್ತು.