ಮಾಜಿ ಸಿಎಂ ಎನ್.ಡಿ. ತಿವಾರಿ ಅವರ ಅಂತಿಮ ಸಂಸ್ಕಾರದ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕೆಲ ಮುಖಂಡರು ನಗುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. 

ಲಖನೌ: ಹಿರಿಯ ಕಾಂಗ್ರೆಸ್ಸಿಗ, ಮಾಜಿ ಸಿಎಂ ಎನ್.ಡಿ. ತಿವಾರಿ ಅವರ ಅಂತಿಮ ಸಂಸ್ಕಾರದ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ನಗುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಿವಾರಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಶನಿವಾರ ಬೆಳಗ್ಗೆ ಉತ್ತರ ಪ್ರದೇಶದ ವಿಧಾನಸಭೆ ತರಲಾಯಿತು.

ಈ ವೇಳೆ ಯೋಗಿ ಅವರು, ಬಿಹಾರ ರಾಜ್ಯಪಾಲ ಲಾಲ್‌ಜೀ ತಂಡನ್, ಉತ್ತರ ಪ್ರದೇಶ ಸಚಿವರಾದ ಮೋಹ್ಸಿನ್ ರಾಜಾ ಮತ್ತು ಅಶುತೋಷ್ ತಂಡನ್ ಅವರೊಂದಿಗೆ ಸಮಾಲೋಚಿಸುವಾಗ, ಎಲ್ಲರೂ ನಕ್ಕಿದ್ದಾರೆ. ಈ ಕುರಿತಾದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.