ನವದೆಹಲಿ(ಜ.26): ಅಯೋಧ್ಯೆ ವಿವಾದವನ್ನು ಸುಪ್ರೀಂ ಕೋರ್ಟ್ ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಜನ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು ಎಂದು ಯೋಗಿ ಆಗ್ರಹಿಸಿದ್ದಾರೆ. 

ಒಂದು ವೇಳೆ ಬೇಗ ತೀರ್ಪ ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯಾರ್ಥಪಡಿಸುತ್ತೇವೆ ಎಂದು ಉತ್ತರ ಪ್ರದೇಶ ಸಿಎಂ ಹೇಳಿದ್ದಾರೆ.

ವಿವಾದವನ್ನು ಅನಗತ್ಯವಾಗಿ ಎಳೆಯಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿರುವ ಯೋಗಿ, ಆದಷ್ಟು ಬೇಗ ನ್ಯಾಯ ಸಿಗಬೇಕು ಎಂಬುದಷ್ಟೇ ನಮ್ಮ ಕಳಕಳಿಯಾಗಿದೆ ಎಂದು ಹೇಳಿದರು.