Asianet Suvarna News Asianet Suvarna News

ಅನುರಾಗ್ ತಿವಾರಿ ಪ್ರಕರಣ ಸಿಬಿಐಗೆ

ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಹತ್ಯೆ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದೆ. ಪ್ರಕರಣವನ್ನು ಸಿಬಿಐಗೆ ಶಿಫಾರಸ್ಸು ಮಾಡಲು ಉತ್ತರ ಪ್ರದೇಶ ಸರ್ಕಾರವು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ನಾಳೆ ಭೇಟಿ ಮಾಡಲಿದೆ. 

UP govt recommends CBI investigation into IAS officer Anurag Tiwari death

ನವದೆಹಲಿ (ಮೇ.22): ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಹತ್ಯೆ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದೆ. ಪ್ರಕರಣವನ್ನು ಸಿಬಿಐಗೆ ಶಿಫಾರಸ್ಸು ಮಾಡಲು ಉತ್ತರ ಪ್ರದೇಶ ಸರ್ಕಾರವು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ನಾಳೆ ಭೇಟಿ ಮಾಡಲಿದೆ. 

ಅನುರಾಗ್ ತಿವಾರಿ ಕುಟುಂಬವು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಇಂದು ಭೇಟಿ ಮಾಡಿದ್ದು ಸಿಬಿಐ ತನಿಖೆಗೆ ಒತ್ತಾಯಿಸಿದೆ. ಅವರದು ಸಹಜ ಸಾವಲ್ಲ. ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೋಸ್ಟ್ ಮಾರ್ಟಮ್ ವರದಿ ಹೇಳುತ್ತದೆ. ಹಾಗಾಗಿ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕುಟುಂಬದವರು ಒತ್ತಾಯಿಸಿದ್ದಾರೆ. ಒತ್ತಡಕ್ಕೆ ಮಣಿದ ಸರ್ಕಾರ ಕಡೆಗೂ ಸಿಬಿಐಗೆ ವಹಿಸಲು ನಿರ್ಧರಿಸಿದೆ.   

Follow Us:
Download App:
  • android
  • ios