ಮುಸ್ಲಿಂ ವ್ಯಕ್ತಿಯೊಂದಿಗೆ ಸ್ನೇಹ ಮಾಡಿದ್ದಕ್ಕೆ ಹಿಂದೂ ಯುವತಿಗೆ ಪೊಲೀಸರು ಸೇರಿ ಮನಬಂದಂತೆ ಥಳಿಸಿದ ವಿಡಿಯೋ ಒಂದು ಸಾಮಾಜಿಲಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಲಕ್ನೋ : ಮೂವರು ಪೊಲೀಸರು ಹಾಗೂ ಓರ್ವ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಸೇರಿ ಹಿಂದು ಯುವತಿಯನ್ನು ಮನಬಂದಂತೆ ಥಳಿಸಿದ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮುಸ್ಲಿಂ ವ್ಯಕ್ತಿಯೊಂದಿಗೆ ಸ್ನೇಹ ಮಾಡಿದ್ದರಿಂದ ಹಿಂದೂ ಮಹಿಳೆಗೆ ಮನಬಂದಂತೆ ಪೊಲೀಸರು ಥಳಿಸಿದ್ದಾರೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಅತ್ಯಂತ ಕೆಟ್ಟ ಭಾಷೆಗಳನ್ನು ಬಳಸಿ ಮಹಿಳೆಗೆ ಥಳಿಸಿದ್ದಾರೆ.
ಅಲ್ಲದೇ ಮುಸ್ಲಿಂ ವ್ಯಕ್ತಿಯೊಂದಿಗೆ ನೀನ್ಯಾಕೆ ಸ್ನೇಹ ಮಾಡಿದೆ ಎಂದೂ ಕೂಡ ಪ್ರಶ್ನೆ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಸಾಕಷ್ಟು ಪ್ರಮಾಣದಲ್ಲಿ ಟೀಕೆ ವ್ಯಕ್ತವಾಗಿದೆ.
