ಲಕ್ನೋ(ಜೂ.29): ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅಪರಾಧಿಗಳು ನಿರ್ಭಯವಾಗಿ ಓಡಾಡಿಕೊಂಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಬಿಜೆಪಿ ಆಡಳಿತ ಜಂಗಲ್ ರಾಜ್ ನಂತಾಗಿದೆ ಎಂದು ಗುಡುಗಿದ್ದಾರೆ.

ಆದರೆ ಪ್ರಿಯಾಂಗಾ ಟ್ವೀಟ್’ಗೆ ಸೂಕ್ತ ತಿರುಗೇಟು ನೀಡಿರುವ ಉತ್ತರಪ್ರದೇಶ ಪೊಲೀಸ್ ಇಲಾಖೆ, ರಾಜ್ಯದಲ್ಲಿ ಅಪರಾಧ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬುದನ್ನು ಅಂಕಿ ಅಂಶಗಳ ಸಮೇತ ಹೊರಗಡೆವಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಪೊಲೀಸ್ ಇಲಾಖೆ, ಅಪರಾಧ ಪ್ರಕರಣಗಳನ್ನು ಹತ್ತಿಕ್ಕುವಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ದಿಟ್ಟ ಕ್ರಮಗಳ ಕುರಿತು ವಿವರಣೆ ನೀಡಿದೆ.