ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಪ್ರಕರಣದ ತನಿಖಾಧಿಕಾರಿಗಳನ್ನು ಬದಲಿಸುವಂತೆ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಕುಮಾರ್ ಒತ್ತಾಯಿಸಿದ್ದಾರೆ.
ಬೆಂಗಳೂರು (ಸೆ.25): ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಪ್ರಕರಣದ ತನಿಖಾಧಿಕಾರಿಗಳನ್ನು ಬದಲಿಸುವಂತೆ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಕುಮಾರ್ ಒತ್ತಾಯಿಸಿದ್ದಾರೆ.
ಕೇಂದ್ರ ಕ್ಯಾಬಿನೆಟ್ಕಾರ್ಯದರ್ಶಿಗೆ ಪತ್ರ ಬರೆದಿರುವ ವಿಜಯ್ ಕುಮಾರ್, ಸಿಬಿಐ ಕಡೆಯಿಂದ ಸಾಕಷ್ಟು ತಪ್ಪುಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಅನುರಾಗ್ ತಿವಾರಿ ಸಾವನ್ನಪ್ಪಿದ ದಿನ ಅವರ ಜೊತೆಗಿದ್ದ ಐಎಎಸ್ ಅಧಿಕಾರಿ ಹಾಗೂ ಆಹಾರ ಇಲಾಖೆ ಹಿರಿಯ ಅಧಿಕಾರಿಗಳನ್ನು ಬಂಧಿಸುವಂತೆ ಅವರ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಅನುರಾಗ್ ಡ್ರಗ್ ಓವರ್ ಡೋಸ್ನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ನಂಬಿಸುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಐಪಿಎಸ್ ದರ್ಜೆಯ ಅಧಿಕಾರಿಗಳನ್ನು ತನಿಖಾಧಿಕಾರಿಗಳಾಗಿ ನೇಮಿಸುವಂತೆ ವಿಜಯ್ ಕುಮಾರ್ ಒತ್ತಾಯಿಸಿದ್ದಾರೆ.
