ನವದೆಹಲಿ(ಸೆ.19): ಭಯೋತ್ಫಾದಕರು ಸೇನಾ ಶಿಬಿರ ಉರಿಯಲ್ಲಿ ದಾಳಿ ನಡೆಸಿ 20 ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದೆ. ಹೀಗಾಗಿ ನವೆಂಬರ್'ನಲ್ಲಿ ಇಸ್ಲಾಮಾಬಾದ್'ನಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವುದು ಅನುಮಾನ ಎನಿಸಿದೆ.

ಸಾರ್ಕ್ ಸಭೆಯಲ್ಲಿ ಭಾಗವಹಿಸುವ ಕುರಿತಂತೆ ಇಲ್ಲಿಯವರೆಗೂ ನರೇಂದ್ರ ಮೋದಿ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

ಭಯೋತ್ಫಾದನೆ ಸದಾ ನೇರ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ನಡೆ ನಮಗೆ ತೀವ್ರ ನಿರಾಸೆ ಮೂಡಿಸಿದೆ ಎಂದು ಗೃಹ ಸಚಿವ ರಾಜ್'ನಾಥ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ವಿದ್ಯಾಮಾನಗಳನ್ನು ಗಮನಿಸಿದರೆ ಸಾರ್ಕ್ ಸಮ್ಮೇಳದಿಂದ ಹೊರಗುಳಿಯುವ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಕೈಗೊಂಡರ ಅಚ್ಚರಿಯೇನಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.