ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಅಮೆರಿಕಾವು ಖಂಡಿಸಿದೆ. ಗೌರಿ ಹತ್ಯೆಯನ್ನು ಖಂಡಿಸಿರುವ ಅಮೆರಿಕಾ ರಾಯಭಾರಿ ಕಚೇರಿಯು, ಅಮೆರಿಕಾವು ಪತ್ರಿಕಾ ಸ್ವಾತಂತ್ರ್ಯದ ಪರವಾಗಿದೆ, ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸುತ್ತದೆ ಎಂದು ಹೇಳಿದೆ.

ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಅಮೆರಿಕಾವು ಖಂಡಿಸಿದೆ.

ಗೌರಿ ಹತ್ಯೆಯನ್ನು ಖಂಡಿಸಿರುವ ಅಮೆರಿಕಾ ರಾಯಭಾರಿ ಕಚೇರಿಯು, ಅಮೆರಿಕಾವು ಪತ್ರಿಕಾ ಸ್ವಾತಂತ್ರ್ಯದ ಪರವಾಗಿದೆ, ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸುತ್ತದೆ ಎಂದು ಹೇಳಿದೆ.

ಮಂಗಳವಾರ ಸಂಜೆ ಗೌರಿ ಲಂಕೇಶ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದು, ರಾಜ್ಯ ಸರ್ಕಾರವು ತನಿಖೆಯ ಹೊಣೆಯನ್ನು ಎಸ್ಐಟಿಗೆ ಹೊರಿಸಿದೆ.

ಈ ನಡುವೆ ಕೇಂದ್ರ ಗೃಹ ಇಲಾಖೆಯು ಕೂಡಾ ಗೌರಿ ಹತ್ಯೆ ಕುರಿತಂತೆ ವರದಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಹೇಳಿದೆ.

ಗೌರಿ ಲಂಕೇಶ್ ಹತ್ಯೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆಗಳು ಕೂಡಾ ನಡೆಯುತ್ತಿವೆ.