ಪಾಕಿಸ್ತಾನದ ವಿಷಯದಲ್ಲಿ ಅಮೆರಿಕದ ಹೊಸ ನೀತಿಯಲ್ಲಿ ಬದಲಾವಣೆಯಾಗಿದೆ. ಉಗ್ರ ಸಂಘಟನೆಗಳಿಗೆ ಸುರಕ್ಷಿತ ತಾಣವಾಗಿರುವ ಪಾಕಿಸ್ತಾನದ ಬಗ್ಗೆ ಇನ್ನೂ ಮೌನವಾಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ವಾಷಿಂಗ್ಟನ್(ಆ.23): ಉಗ್ರರಿಗೆ ಸುರಕ್ಷಿತ ತಾಣವಾಗಿರುವ ಪಾಕಿಸ್ತಾನ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಅಫ್ಘಾನಿಸ್ತಾನದಿಂದ ತರಾತುರಿಯಲ್ಲಿ ಅಮೆರಿಕದ ಸೇನೆ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಟ್ರಂಪ್, ಅಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಲು ಪ್ರಯತ್ನಿಸುವಲ್ಲಿ ಭಾರತದ ಸಹಕಾರ ಕೋರಿದ್ದಾರೆ. ಪಾಕಿಸ್ತಾನದ ವಿಷಯದಲ್ಲಿ ಅಮೆರಿಕದ ಹೊಸ ನೀತಿಯಲ್ಲಿ ಬದಲಾವಣೆಯಾಗಿದೆ. ಉಗ್ರ ಸಂಘಟನೆಗಳಿಗೆ ಸುರಕ್ಷಿತ ತಾಣವಾಗಿರುವ ಪಾಕಿಸ್ತಾನದ ಬಗ್ಗೆ ಇನ್ನೂ ಮೌನವಾಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಶಾಂತಿ, ಸ್ಥಿರತೆ ಸೃಷ್ಟಿಸುವಲ್ಲಿ ಭಾರತದ ಕೊಡುಗೆಗಳನ್ನು ಮೆಚ್ಚುತ್ತೇವೆ ಎಂದಿದ್ದಾರೆ. ಆದರೆ ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿರುವಚೀನಾ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ಪಾತ್ರವನ್ನೂ ಪರಿಗಣಿಸಬೇಕಾಗಿದೆ ಎಂದು ಪಾಕ್ ಪರ ನಿಂತು, ಅಮೆರಿಕಕ್ಕೆ ತಿರುಗೇಟು ನೀಡಿದೆ.
