ಭಾರತ ಅಮೆರಿಕಾ ನಿನ್ನೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ ಸಿಗಲು ಬೆಂಬಲ ನೀಡುವುದಾಗಿ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಹೇಳಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ ಪಡೆಯುವ ಪ್ರಕ್ರಿಯೆಗೆ ಸಾಕಷ್ಟು ಸಮಯ ಹಿಡಿಯುತ್ತದೆ. ಇದಕ್ಕೆ ಅಡೆತಡೆಗಳಿವೆ. ವಿಶ್ವಸಂಸ್ಥೆಯಲ್ಲಿ ಕೆಲವು ಬದಲಾವಣೆಗೆ ನಾವು ಬೆಂಬಲ ನೀಡುತ್ತೇವೆ ಎಂದು ದೆಹಲಿಯ ಐಐಟಿಯ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸುವಾಗ ಕೆರ್ರಿ ಹೇಳಿದ್ದಾರೆ.

ಭಾರತದಲ್ಲಿ ಎರಡು ದಿನ ಪ್ರವಾಸದಲ್ಲಿರುವ ಕೆರ್ರಿ ಪ್ರಧಾನಿ ಮೋದಿಯವರನ್ನು ಅವರ ನಿವಾಸದಲ್ಲಿ ಇಂದು ಭೇಟಿ ಮಾಡಲಿದ್ದಾರೆ.