ಖಾಸಗಿ ವಾಹಿನಿಯೊಂದರಲ್ಲಿ ಮುಸ್ಲಿಂ ಯುವತಿ ಹಿಂದೂ ದೇವರನಾಮ ಹಾಡಿದ್ದು ತಪ್ಪಲ್ಲ ಎಂದು ಆಹಾರ ಸಚಿವ ಯು.ಟಿ.ಖಾದರ್​ ಹೇಳಿದ್ದಾರೆ. ಯುವತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಧಮ್ಕಿ ಹಾಕಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಬೆಂಗಳೂರು(ಮಾ.08): ಖಾಸಗಿ ವಾಹಿನಿಯೊಂದರಲ್ಲಿ ಮುಸ್ಲಿಂ ಯುವತಿ ಹಿಂದೂ ದೇವರನಾಮ ಹಾಡಿದ್ದು ತಪ್ಪಲ್ಲ ಎಂದು ಆಹಾರ ಸಚಿವ ಯು.ಟಿ.ಖಾದರ್​ ಹೇಳಿದ್ದಾರೆ. ಯುವತಿಗೆ ಸಾಮಾಜಿಕ ಜಾಲತಾಣಗಳಲ್ಲಿ ಧಮ್ಕಿ ಹಾಕಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಚಾಮರಾಜನಗರದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ವಿಶ್ವ ಮಹಿಳಾ ದಿನ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಖಾದರ್, ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಧಮ್ಕಿ ಹಾಕಲು ಇವರು ಯಾರು? ಒಂದು ವೇಳೆ ಏನಾದರೂ ತಪ್ಪಾಗಿದ್ದರೆ ಅದಕ್ಕೆ ಧಾರ್ಮಿಕ ಮುಖಂಡರು, ಸಮಾಜದ ಹಿರಿಯರು ಇದ್ದಾರೆ ಅವರು ನೋಡಿಕೊಳ್ಳುತ್ತಾರೆ ಎಂದು ಸಚಿವ ಯ.ಟಿ.ಖಾದರ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಅಶಾಂತಿ ಉಂಟು ಮಾಡುವವರ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.