ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭೆಗೆ 5ನೇ ಹಂತದ ಮತದಾನ ನಡೆಯುತ್ತಿದೆ. 11 ಜಿಲ್ಲೆಗಳ 51 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. 18,822 ಮತ ಕೇಂದ್ರಗಳನ್ನು ತೆರೆಯಲಾಗಿದ್ದು, ಇದರಲ್ಲಿ 2,351 ಮತಗಟ್ಟೆಗಳಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.
ಉತ್ತರ ಪ್ರದೇಶ(ಫೆ.27): ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭೆಗೆ 5ನೇ ಹಂತದ ಮತದಾನ ನಡೆಯುತ್ತಿದೆ. 11 ಜಿಲ್ಲೆಗಳ 51 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. 18,822 ಮತ ಕೇಂದ್ರಗಳನ್ನು ತೆರೆಯಲಾಗಿದ್ದು, ಇದರಲ್ಲಿ 2,351 ಮತಗಟ್ಟೆಗಳಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.
607 ಅಭ್ಯರ್ಥಿಗಳು ಅಭ್ಯರ್ಥಿಗಳಿದ್ದು, 1.81 ಕೋಟಿ ಮತದಾರರು ಈ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮತಗಟ್ಟೆಗಳಿಗೆ ವ್ಯಾಪಕ ಭದ್ರತೆ ಏರ್ಪಡಿಸಲಾಗಿದ್ದು, 905 ಡಿಜಿಟಲ್ ಕ್ಯಾಮರಾ, 978 ವೀಡಿಯೋ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೇ 1792 ಕೇಂದ್ರಗಳಲ್ಲಿ ವೆಬ್ ವೋಟಿಂಗ್ ಜಾರಿಯಲ್ಲಿರಲಿದೆ.
ಮುಖ್ಯವಾಗಿ ಸೋನಿಯಾ ಗಾಂಧಿ ಪ್ರತಿನಿಧಿಸುವ ಅಮೆಥಿಯಲ್ಲಿ ಇಂದೇ ಮತದಾನ ನಡೆಯಲಿದೆ. ಇದಲ್ಲದೇ ಬಲರಾಮ್‌ಪುರ, ಗೊಂಡಾ, ಫೈಜಾಬಾದ್, ಅಂಬೇಡ್ಕರ್ ನಗರ, ಶ್ರವಸ್ತಿ, ಸಿದ್ದಾರ್ಥನಗರ, ಬಸ್ತಿ, ಸಂತ ಕಬೀರನಗರ್, ಸುಲ್ತಾನ್‌ಪುರ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.
