ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಎಐಸಿಸಿ ಉತ್ತರ ಪ್ರದೇಶ ಉಸ್ತುವಾರಿ ಸಚಿವ ಗುಲಾಂ ನಬಿ ಅಜಾದ್ ಇಂದು ಮಾತಿಕತೆ ನಡೆಸಿದ್ದು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷ ಮಹಾಮೈತ್ರಿ ಮಾಡಿಕೊಳ್ಳುವುದನ್ನು  ಖಚಿತಪಡಿಸಿದ್ದಾರೆ.

 ನವದೆಹಲಿ (ಜ.17): ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಎಐಸಿಸಿ ಉತ್ತರ ಪ್ರದೇಶ ಉಸ್ತುವಾರಿ ಸಚಿವ ಗುಲಾಂ ನಬಿ ಅಜಾದ್ ಇಂದು ಮಾತಿಕತೆ ನಡೆಸಿದ್ದು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷ ಮಹಾಮೈತ್ರಿ ಮಾಡಿಕೊಳ್ಳುವುದನ್ನು ಖಚಿತಪಡಿಸಿದ್ದಾರೆ.

ಸ್ಥಾನ ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿಗಳನ್ನು ವಿವರವಾಗಿ ಹೇಳಲಾಗುವುದು ಎಂದು ಗುಲಾಂ ನಬಿ ಅಜಾದ್ ಹೇಳಿದ್ದಾರೆ.

ಅಖಿಲೇಶ್ ಕೂಡಾ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಏತನ್ಮಧ್ಯೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅಖಿಲೇಶ್ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.