ಗೋರಖ್‌ಪುರ[ಜು.08]: ಲೈಂಗಿಕ ಸಂಪರ್ಕಕ್ಕೆ ನಿರಾಕರಿಸಿ ದಳು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಪತ್ನಿ ಕೊಲೆ ಗೈದು ಬಳಿಕ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಕೃತ್ಯದ ರೂವಾರಿ ಅನ್ವರ್‌ಲಾಲ್ ಹಸನ್(24) ಇದೀಗ ಗೋರಖ್‌ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಗುಜರಾತ್‌ನ ಸೂರತ್‌ನಲ್ಲಿ ಕೆಲಸ ಮಾಡುತ್ತಿದ್ದ ಇಲ್ಲಿನ ಪೋಖಾರ್ ಗ್ರಾಮದ ಹಸನ್ ಕಳೆದ ವರ್ಷವಷ್ಟೇ ವಿವಾಹವಾಗಿದ್ದ. ಎರಡು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದ ಹಸನ್ ಪತ್ನಿ ಜೊತೆ ದೇಹ ಸಂಪರ್ಕ ಬಯಸಿದ್ದ. ಆದರೆ, ಇದಕ್ಕೆ ನಿರಾಕರಿಸಿದಾಗ, ಆಕ್ರೋಶಗೊಂಡ ಪತಿ ಉಸಿರು ಗಟ್ಟಿಸಿ ಪತ್ನಿಯನ್ನು ಹತ್ಯೆಗೈದಿದ್ದಾನೆ.