ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶವನ್ನು ಉತ್ತಮ ಪ್ರದೇಶವನ್ನಾಗಿ ಮಾಡುವಲ್ಲಿ ಹೊಸ ತಂಡವು ಎಲ್ಲಾ ಪ್ರಯತ್ನಗಳನ್ನು ಮಾಡುವುದೆಂಬ ವಿಶ್ವಾಸವಿದೆ ಎಂದು ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ.

ನವದೆಹಲಿ (ಮಾ.19): ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯೋಗಿ ಆದಿತ್ಯನಾಥ್, ಉಪ-ಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ, ದಿನೇಶ್ ಶರ್ಮಾ ಹಾಗೂ ಸಚಿವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

Scroll to load tweet…

ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶವನ್ನು ಉತ್ತಮ ಪ್ರದೇಶವನ್ನಾಗಿ ಮಾಡುವಲ್ಲಿ ಹೊಸ ತಂಡವು ಎಲ್ಲಾ ಪ್ರಯತ್ನಗಳನ್ನು ಮಾಡುವುದೆಂಬ ವಿಶ್ವಾಸವಿದೆ ಎಂದು ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ದಾಖಲೆಯ ಅಭಿವೃದ್ಧಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶದ ಅಭಿವೃದ್ಧಿಯೇ ನಮ್ಮ ಗುರಿ. ಉತ್ತರ ಪ್ರದೇಶ ಪ್ರಗತಿ ಸಾಧಿಸಿದರೆ ಭಾರತ ಪ್ರಗತಿ ಸಾಧಿಸಿದಂತೆ ಎಂದು ಮೋದಿ ಟ್ವೀಟಿಸಿದ್ದಾರೆ.