ಬೆಂಗಳೂರು[ಸೆ. 09]  ‘ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು!  ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ.  ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನೀಯತ್ತು ತೋರಿಸಲಿ’

ಭಾರೀ ಅವ್ಯವಹಾರದಲ್ಲಿ ರಾಜೀನಾಮೆ ಕೊಟ್ಟ ಸೆಂಥಿಲ್?

ಹೀಗೆಂದು ರಾಜೀನಾಮೆ ಕೊಟ್ಟ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ತರಾಟೆಗೆ ತೆಗೆದುಕೊಂಡಿದ್ದಾರೆ.

 ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ್ದ ಆರ್ಟಿಕಲ್ 370ನ್ನು ತೆಗೆದು ಹಾಕಿದ್ದು ಸೇರಿದಂತೆ ಕೇಂದ್ರ ಸರ್ಕಾರದ ಅನೇಕ ವಿಚಾರಗಳನ್ನು ಸೆಂಥಿಲ್ ವಿರೋಧಿಸಿದ್ದರು ಎಂಬುದಕ್ಕೆ ಹೆಗಡೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.