ಜನವರಿ 7 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಉತ್ತರ ಪ್ರದೇಶ ಸಿಎಂ  ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ.  

ಬೆಂಗಳೂರು (ಜ.03): ಜನವರಿ 7 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲಿನ ಗೋವಿಂದರಾಜನಗರದಲ್ಲಿ ನಗರ ಕೇಂದ್ರಿತ ಪರಿವರ್ತನಾ ಸಮಾವೇಶ ನಡೆಯಲಿದೆ.

 ಡಿ.21 ರಂದು ಹುಬ್ಬಳ್ಳಿಯಲ್ಲಿ ನಡೆದಿದ್ದ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಯೋಗಿ ಆದಿತ್ಯನಾಥ್ ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿ ಒಂದು ವಾರದ ಮಟ್ಟಿಗೆ ಕಾಂಗ್ರೆಸ್ ನಾಯಕರು ಉತ್ತರ ಕೊಡುವಂತೆ ಮಾಡಿದ್ದರು.

ಇದೀಗ ಮತ್ತೆ ಎರಡನೇ ಬಾರಿಗೆ ರಾಜ್ಯಕ್ಕೆ ಪರಿವರ್ತನಾ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಇವರ ಆಗಮನ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಲಿದೆ.