ಇಟಾನಗರ(ಸೆ.15): ಮೇಘಾಲಯದ ರಾಜ್ಯಪಾಲ ವಿ. ಷಣ್ಮುಗನಾಥನ್ ಇಂದು ಹೆಚ್ಚುವರಿಯಾಗಿ ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಗುವಾಹಟಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಜಿತ್ ಸಿಂಗ್ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪ್ರೇಮ್ ಖಂಡೂ ಹಾಗೂ ಸಚಿವ ಸಚಿವ ಸಂಪುಟದ ಸಹೊದ್ಯೋಗಿಗಳು ಹಾಜರಿದ್ದರು.

ಅರುಣಾಚಲದಲ್ಲಿ ಕಾಂಗ್ರೆಸ್ ಸರಕಾರವನ್ನು ಸುಪ್ರೀಂಕೋರ್ಟ್ ಪುನರ್'ಸ್ಥಾಪನೆ ಮಾಡಿದ ಬಳಿಕ, ಸೆ.12ರಂದು ಅಂದಿನ ರಾಜ್ಯಪಾಲ ಜ್ಯೋತಿ ಪ್ರಸಾದ್ ರಾಜ್'ಕೋವಾ ಅವರನ್ನು ವಜಾಗೊಳಿಸಲಾಗಿತ್ತು. ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ವಿ. ಷಣ್ಮುಗನಾಥನ್ ಅವರನ್ನು ಹೆಚ್ಚವರಿ ರಾಜ್ಯಪಾಲರಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನೇಮಿಸಿದ್ದಾರೆ.