ಗೋವಿಂದರಾಜನಗರದಲ್ಲೇ ವಿ. ಸೋಮಣ್ಣ ಸ್ಪರ್ಧೆ

First Published 7, Apr 2018, 11:57 AM IST
V Somanna Contest Election
Highlights

ಗೋವಿಂದರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಗೊಂದಲ ಮೂಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಪಕ್ಷದ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ಬೂತ್ ಮಟ್ಟದ ಪ್ರಮುಖ ಕಾರ್ಯಕರ್ತರ ಸಭೆ ನಿಗದಿಯಾಗಿದೆ.

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಗೊಂದಲ ಮೂಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಪಕ್ಷದ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ಬೂತ್ ಮಟ್ಟದ ಪ್ರಮುಖ ಕಾರ್ಯಕರ್ತರ ಸಭೆ ನಿಗದಿಯಾಗಿದೆ.

ಈ ಸಭೆಯಲ್ಲಿಯೇ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಯೂ ಇದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸೋಮಣ್ಣ ಅವರನ್ನು ಅಭ್ಯರ್ಥಿಯನ್ನಾಗಿಸುವಂತೆ ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.

ಅಲ್ಲದೆ, ಕಣಕ್ಕಿಳಿಯುವಂತೆ ಸೋಮಣ್ಣ ಅವರನ್ನೂ ಬಲವಾಗಿ ಆಗ್ರಹಿಸಿದ್ದಾರೆ. ಇಷ್ಟಾದರೂ ಗೊಂದಲ ಮುಂದುವರೆದೇ ಇದೆ. ಹೀಗಾಗಿ, ಕ್ಷೇತ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

loader